ತನಗೆ ಜೀವ ಬೆದರಿಕೆ ಸಾಧ್ಯತೆಯಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣದಲ್ಲಿ ಬಂಧಿತನಾಗಿ ಇದೀಗ ಜಾಮೀನಿನಲ್ಲಿ ಹೊರಬಂದಿರುವ ಸಿ.ಎನ್. ಚಿನ್ನಯ್ಯ ಪೊಲೀಸರಿಗೆ ಮನವಿ ಮಾಡಿದ್ದಾರೆ.
ತನಗೆ ಹಾಗೂ ತನ್ನ ಪತ್ನಿಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್, ಸಮೀರ್ ಎಂ.ಡಿ ಎಂಬವರುಗಳು ಜೀವ ಬೆದರಿಕೆ ಹಾಕುವ ಸಾಧ್ಯತೆ ಇದೆ, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಆತ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದು, ಮನವಿಯನ್ನು ಸ್ವೀಕರಿಸಿಕೊಂಡ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸರು PO1070250601253 ರಂತೆ ದೂರರ್ಜಿಯನ್ನು ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣ ಹೂತಿದ್ದೇನೆ ಎಂಬ ಈ ಪ್ರಕರಣ ಆರಂಭದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿ, ಬಳಿಕ ಎಸ್.ಐ.ಟಿ ಗೆ ವರ್ಗಾವಣೆಯಾಗಿತ್ತು. ಬಳಿಕ ಸುಳ್ಳು ಆರೋಪ ಹಿನ್ನೆಲೆಯಲ್ಲಿ ಚಿನ್ನಯ್ಯನ ಬಂಧನವಾಗಿತ್ತು.

