‘ಮಹಾ’ ಸಿಎಂ ಮಾನವೀಯತೆಯ ನಡೆ: ಭೂಕುಸಿತದಲ್ಲಿ ಅನಾಥರಾದ ಮಕ್ಕಳನ್ನು ದತ್ತು ಪಡೆದ ಏಕನಾಥ್‌ ಶಿಂಧೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ರಾಯಗಢದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆಯಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ (Eknath Shinde) ತೀರ್ಮಾನಿಸಿದ್ದಾರೆ.

ರಾಯಗಢದ ಇರ್ಷಲ್‌ವಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಹಲವು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ, ತಂದೆ-ತಾಯಿಯನ್ನು ಕಳೆದುಕೊಂಡ ಎಲ್ಲ ಮಕ್ಕಳನ್ನು ದತ್ತು ಪಡೆದುಕೊಳ್ಳುತ್ತಿದ್ದೇನೆ. ಎರಡು ವರ್ಷದಿಂದ 14 ವರ್ಷದೊಳಗಿನ ಎಲ್ಲ ಮಕ್ಕಳ ಸಂಪೂರ್ಣ ಹೊಣೆ ನನ್ನದು” ಎಂದು ಏಕನಾಥ್‌ ಶಿಂಧೆ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಸೇರಿ ಎಲ್ಲ ಖರ್ಚು-ವೆಚ್ಚಗಳನ್ನು ಶ್ರೀಕಾಂತ್‌ ಶಿಂಧೆ ಫೌಂಡೇಷನ್‌ ನೋಡಿಕೊಳ್ಳುತ್ತದೆ. ಏಕನಾಥ್‌ ಶಿಂಧೆ ಫೌಂಡೇಷನ್‌ಅನ್ನು ಏಕನಾಥ್‌ ಶಿಂಧೆ ಅವರ ಮಗ ಮುನ್ನಡೆಸುತ್ತಿದ್ದಾರೆ. ಪ್ರತಿಯೊಂದು ಮಗುವಿನ ಹೆಸರಿನಲ್ಲಿ ಸ್ಥಿರ ಠೇವಣಿ (Fixed Deposit) ಇಡಲಾಗುತ್ತದೆ. ಆ ಹಣವನ್ನು ಅವರ ಶಿಕ್ಷಣ ಸೇರಿ ಹಲವು ಖರ್ಚುಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಏಕನಾಥ್‌ ಶಿಂಧೆ ಅವರ ವಿಶೇಷ ಕರ್ತವ್ಯಾಧಿಕಾರಿ ಮಂಗೇಶ್‌ ಚಿವ್ಟೆ ಮಾಹಿತಿ ನೀಡಿದ್ದಾರೆ.

ಈ ಮೂಲಕ ಏಕನಾಥ್‌ ಶಿಂಧೆ ಅವರ ಕುರಿತು ಮೆಚ್ಚುಗೆಯ ಮಾತುಗಳು ವ್ಯಕ್ತವಾಗಿವೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಪ್ರಬಲ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಮನೆಗಳು ಕುಸಿದಿದ್ದು, ಅವಶೇಷಗಳಲ್ಲಿ ಸಿಲುಕಿದವರ ರಕ್ಷಣೆಗೆ ಶನಿವಾರವೂ ಕಾರ್ಯಾಚರಣೆ ಮುಂದುವರಿದಿದೆ. ಇನ್ನು ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!