ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮರದ ಕೊಂಬೆ ಬಡಿದು ಪ್ರಯಾಣಿಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಬೇಲೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಿಂಬದಿಗೆ ಮರದ ಕೊಂಬೆ ಬಡಿದಿದೆ. ಬಸ್ ಹಿಂಬದಿಗೆ ಹಾನಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.
ಬಸ್ ತೆರಳುವ ವೇಳೆ ಎದುರಿನಿಂದ ಬಂದ ಟಿಪ್ಪರ್ ಗೆ ದಾರಿ ಬಿಡುವಾಗ ಮರದ ಕೊಂಬೆ ಬಸ್ ಗೆ ಬಡಿದು ಈ ಅವಘಡ ಸಂಭವಿಸಿದೆ.
ಬೇಲೂರು ಗ್ರಾಮಾಂತರ ಠಾಣೆ ಪೋಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.