ಟೀಮ್ ಇಂಡಿಯಾ ವಿರುದ್ಧ ಗೆದ್ದು ಎಮರ್ಜಿಂಗ್ ಏಷ್ಯಾಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಪಾಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಎಮರ್ಜಿಂಗ್ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ ಪಾಕಿಸ್ತಾನ ಎ ವಿರುದ್ಧ ಸೋಲು ಅನುಭವಿಸಿದ್ದು, ಈ ಮೂಲಕ ಪಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಯಶ್ ಧುಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 352 ರನ್ ಬಾರಿಸಿತು.

ಈ 353 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಸಾಯಿ ಸುದರ್ಶನ್ ಹಾಗೂ ಅಭಿಷೇಶ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. 5 ಓವರ್​ಗಳಲ್ಲೇ ತಂಡದ ಮೊತ್ತವನ್ನು 50 ರ ಗಡಿದಾಟಿಸಿದ್ದರು.

ಆದರೆ 35 ಓವರ್ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು 205 ರನ್​ಗಳಿಸಿತ್ತು. ಇನ್ನು 9ನೇ ವಿಕೆಟ್​ ಆಗಿ ರಾಜವರ್ಧನ್ (11) ಕ್ಲೀನ್ ಬೌಲ್ಡ್ ಆದರು. ಹಾಗೆಯೇ ಅಂತಿಮವಾಗಿ ಯುವರಾಜ್​ಸಿನ್ಹ್​ (5) ಔಟಾಗುವುದರೊಂದಿಗೆ ಟೀಮ್ ಇಂಡಿಯಾ 40 ಓವರ್​ಗಳಲ್ಲಿ 224 ರನ್​ಗಳಿಗೆ ಸರ್ಪಪತನ ಕಂಡಿತು. ಈ ಮೂಲಕ ಪಾಕ್ ತಂಡವು 128 ರನ್​ಗಳ ಭರ್ಜರಿ ಜಯ ಸಾಧಿಸಿ ಎಮರ್ಜಿಂಗ್ ಏಷ್ಯಾಕಪ್ ಅನ್ನು ತಮ್ಮದಾಗಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!