SHOCKING VIDEO| ನಡುರಸ್ತೆಯಲ್ಲಿ ಕಂಡ ಕಂಡವರ ಮೇಲೆ ಗೂಳಿ ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಬಿಡಾಡಿ ದನಗಳು ರಸ್ತೆಯಲ್ಲಿ ಅವಾಂತರ ಸೃಷ್ಟಿಸುತ್ತಿವೆ. ಸಿಕ್ಕ ಸಿಕ್ಕವರ ಮೇಲೆ ದಾಳಿ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ಅಂಥಹದ್ದೇ ಮತ್ತೊಂದು ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಎದೆ ಝಲ್‌ ಎನಿಸುವಂತಿದೆ.

ಶಾಂತವಾಗಿದ್ದ ಗೂಳಿಯೊಂದು ಏಕಾಏಕಿ ರಸ್ತೆಯಲ್ಲಿ ಕಂಡ ಕಂಡವರ ಮೇಲೆ ದಾಳಿ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿ ರಸ್ತೆಯಲ್ಲಿ ಬೈಕ್‌ ಮೇಲೆ ಹೋಗುತ್ತಿದ್ದ ತಾಯಿ ಮಗನ ಮೇಲೆ ಗೂಳಿ ಮನಬಂದಂತೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.

ಪೂರ್ವ ದೆಹಲಿಯ ಗೀತಾ ಕಾಲೋನಿ ಪ್ರದೇಶದಲ್ಲಿ ಈ ದುರಂತ ನಡೆದಿದ್ದು, ಆ ರಸ್ತೆ ಸದಾ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ. ಇಂತಹ ಪ್ರದೇಶದಲ್ಲಿ ಗೂಳಿಯೊಂದು ರಸ್ತೆಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ತನ್ನ ಕೊಂಬುಗಳಿಂದ ತಾಯಿ ಮಗನನ್ನು ಗಂಭೀರವಾಗಿ ಗಾಯಗೊಳಿಸಿದೆ. ಇದನ್ನು ಗಮನಿಸಿದ ಇತರೆ ವಾಹನ ಸವಾರರು ಹಾಗೂ ಸ್ಥಳೀಯರು ಕೂಡಲೇ ಸ್ಥಳಕ್ಕೆ ಬಂದರು. ಗೂಳಿಯನ್ನು ಓಡಿಸಲು ಕಲ್ಲು, ದೊಣ್ಣೆಗಳಿಂದ ಯತ್ನಿಸಿದರೂ ಗೂಳಿ ಹೆದರಲಿಲ್ಲ. ತಡೆಯಲು ಮುಂದಾದ ಸ್ಥಳೀಯರ ಮೇಲೂ ಎರಗಿದೆ. ಗೂಳಿಯಿಂದ ದಾಳಿಗೊಳಗಾದವರನ್ನ ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!