ಹೊಸದಿಗಂತ ಡಿಜಿಟಲ್ ಡೆಸ್ಕ್:
ತ್ರಿಪುರಾದ ಖೋವಾಯ್‌ನಲ್ಲಿ ಭೂಕಂಪ ಸಂಭವಿಸಿದೆ. ಇಂದು ಮಧ್ಯಾಹ್ನ 3:34ಕ್ಕೆ ತ್ರಿಪುರಾದ ಖೋವಾಯ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
31 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್‌ಸಿಎಸ್ ವಿವರಿಸಿದೆ.
ಉತ್ತರಾಖಂಡದ ಪಿತೋರ್‌ಗಢದಲ್ಲಿ ಭಾನುವಾರ 3.2 ತೀವ್ರತೆಯ ಭೂಕಂಪ ಸಂಭವಿಸಿತ್ತು.