ನಾನು ಮಂತ್ರಿ, ಸಿಎಂ ಸೇರಿ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿಲ್ಲ: ಹರಿಪ್ರಸಾದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ವಿಧಾನಪರಿಷತ್​ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಇದೀಗ ಮತ್ತೆ ಮಾತನಾಡಿದ್ದು, ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ ಎಂದು​ ಹೇಳಿದ್ದಾರೆ.

ಇತ್ತೀಚೆಗೆ ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತಿದೆ ಎಂದಿದ್ದ ಬಿ.ಕೆ.ಹರಿಪ್ರಸಾದ್​ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಇದೀಗ ಟ್ವೀಟ್​ ಮಾಡಿರುವ ಅವರು, ಸಾಮಾಜಿಕ ಬದಲಾವಣೆಗಾಗಿ ನಾನು ರಾಜಕೀಯಕ್ಕೆ ಬಂದವನು ಎಂದಿದ್ದಾರೆ.ಮಂತ್ರಿ, ಸಿಎಂ ಸೇರಿ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆಯೇ ಮಂತ್ರಿ ಸ್ಥಾನ ಸಿಗದೇ ಇದ್ದುದಕ್ಕೆ ವಿ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!