ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಬೆಳಗಾವಿಯಲ್ಲಿ 13 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸಿನಿಯ ಗ್ರೇಡ್) ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮೀತಿಯು ಸಾಮಾನ್ಯ ವರ್ಗಕ್ಕೆ 35 ವರ್ಷಗಳು. ಪ್ರವರ್ಗ-IIA, IIB, IIIA 38 ವರ್ಷಗಳು. ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ 40 ವರ್ಷಗಳನ್ನು ಮೀರಬಾರದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650 ರಿಂದ 52,650 ರೂ. ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 21,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.