ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಡಿ.ಎಂ ಕುರ್ಕೆ ಗ್ರಾಮದಲ್ಲಿ ನಡೆದಿದೆ.
ಮನೆಯ ಗೋಡೆ ಕುಸಿದ ಪರಿಣಾಮ ಗೌರಮ್ಮ(62) ಸಾವನ್ನಪ್ಪಿದ್ದು, ಅವರ ಪತಿ ನಟರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ನಿನ್ನೆ ರಾತ್ರಿ ಮನೆಯೊಳಗಿದ್ದ ಗೌರಮ್ಮ ಅಡುಗೆ ಮಾಡುವ ವೇಳೆ ಅವರ ಮೇಲೆ ಏಕಾಏಕಿ ಗೋಡೆ ಕುಸಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.