ಹೊಸದಿಗಂತ ಡಿಜಿಟಲ್ ಡೆಸ್ಕ್:
24ನೇ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಲಡಾಖ್ನ ಕಾರ್ಗಿಲ್ ಜಿಲ್ಲೆಯ ದ್ರಾಸ್ಗೆ ಆಗಮಿಸಿದರು. ಕಾರ್ಗಿಲ್ನ ಯುದ್ಧದಲ್ಲಿ ಮಡಿದ ವೀರ ಯೋಧರ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಮಾಡಿ, ಗೌರವ ಸಲ್ಲಿಸಿದರು.
ವಿಜಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಜೊತೆಯಾಗಿ ವೀರ ಯೋಧರನ್ನು ಸ್ಮರಿಸುತ್ತಾ ಪುಷ್ಪಗುಚ್ಛ ಸಮರ್ಪಿಸಿದರು.
ಮಂಗಳವಾರ, ದ್ರಾಸ್ನ ಲಾಮೊಚೆನ್ನಲ್ಲಿ ಸ್ಮರಣಾರ್ಥ ಕಾರ್ಯಕ್ರಮದ ಕುರಿತು ಸೇನೆಯು ಪತ್ರಿಕಾಗೋಷ್ಠಿಯನ್ನು ನಡೆಸಿತು. 1999 ರಲ್ಲಿ ತೆರೆದುಕೊಂಡ ಕಾರ್ಗಿಲ್ ಸಂಘರ್ಷದಲ್ಲಿ ಯೋಧರ ಶೌರ್ಯ ಮತ್ತು ತ್ಯಾಗವನ್ನು ನೆನೆಪಿಸಿತು. ಎರಡು ತಿಂಗಳುಗಳ ಕಾಲ ನಡೆದ ಸಂಘರ್ಷದಲ್ಲಿ, ಕಾರ್ಗಿಲ್ನಲ್ಲಿ ಕೆಲವು ಅನುಕೂಲಕರ ಸ್ಥಳಗಳನ್ನು ಆಕ್ರಮಿಸಿಕೊಂಡಿದ್ದ ಪಾಕಿಸ್ತಾನಿ ಒಳನುಗ್ಗುವವರನ್ನು ಹಿಮ್ಮೆಟ್ಟಿಸುವಲ್ಲಿ ಸೈನ್ಯವು ಯಶಸ್ವಿಯಾಯಿತು. ಶತ್ರುಗಳಿಂದ ವಶಪಡಿಸಿಕೊಂಡ ಭೂಪ್ರದೇಶದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿತು.
ಕಾರ್ಗಿಲ್ ವಿಜಯ್ ದಿವಸ್ ಸ್ಮರಣಾರ್ಥವಾಗಿ ನೆರೆದಿದ್ದ ಸೈನಿಕರ ಭಾವೋದ್ವೇಗಕ್ಕೆ ಸೇನಾ ಬ್ಯಾಂಡ್ನ ಶಬ್ಧ ದೇಶಪ್ರೇಮವನ್ನು ಮತ್ತಷ್ಟು ಹೆಚ್ಚಿಸುವಂತಿತ್ತು. ಯುದ್ಧದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಯೋಧರ ಬಂಧುಗಳ ಉಪಸ್ಥಿತಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.