ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕೋಟಿ ಪರಿಹಾರಕ್ಕೆ ಪತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ.
ಈ ವೇಳೆ ಹೈಕೋರ್ಟ್ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ನೋಟಿಸ್ ನೀಡಿದೆ.
ಮೃತ ಮಹಿಳೆಯ ಪತಿ ಲೋಹಿತ್ ಕುಮಾರ್ ವಿ ಸುಲಾಖೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದು, ಬಿಎಂಆರ್‌ಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ದೂರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ತುರ್ತು ನೋಟಿಸ್ ನೀಡಿದೆ. ಪ್ರತಿವಾದಿಗಳಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದ ನಂತರ ನ್ಯಾಯಾಲಯವು ಪ್ರಕರಣವನ್ನು ಮುಂದೂಡಿದೆ.
ಪತ್ನಿ ಮತ್ತು ಪುತ್ರನ ಸಾವಿಗೆ ಪರಿಹಾರವಾಗಿ 20 ಲಕ್ಷ ರು. ನೀಡುವುದಾಗಿ ಹೇಳಿದ್ದರು. ಆದ್ರೆ ಮೆಟ್ರೋ ನೀಡಿರುವ ಪರಿಹಾರವನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ 10 ಕೋಟಿ ಪರಿಹಾರ ನೀಡಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ.