ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ಅಮೀಶಾ ಪಟೇಲ್ ಗೆ ರಾಂಚಿ ಕೋರ್ಟ್ 500 ರೂಪಾಯಿ ದಂಡ ವಿಧಿಸಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಯನ್ನು ಕ್ರಾಸ್ ಎಕ್ಸಾಮಿನ್ ಮಾಡಲು ಅವರ ವಕೀಲರು ಹಾಜರಾಗದ ಕಾರಣ ರಾಂಚಿಯ ಸಿವಿಲ್ ನ್ಯಾಯಾಲಯವು ಅವರಿಗೆ 500 ರೂಪಾಯಿ ದಂಡ ವಿಧಿಸಿದೆ.
ಪಟೇಲ್‌ಗೆ ದಂಡ ವಿಧಿಸುವ ಸಂದರ್ಭದಲ್ಲಿ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕವನ್ನು ಆಗಸ್ಟ್ 7 ಎಂದು ನಿಗದಿಪಡಿಸಿತು.
2018 ರಲ್ಲಿ ಜಾರ್ಖಂಡ್ ಮೂಲದ ಚಲನಚಿತ್ರ ನಿರ್ಮಾಪಕ ಅಜಯ್ ಕುಮಾರ್ ಸಿಂಗ್ ಅವರು ನಟಿಯ ಚೆಕ್ ಬೌನ್ಸ್ ಆದ ನಂತರ ಪ್ರಕರಣವನ್ನು ದಾಖಲಿಸಿದ್ದಾರೆ.