ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನವಾಪಿ ಮಸೀದಿ (Gyanvapi mosque) ಆವರಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಗುರುವಾರ (ಜುಲೈ 27) ವರೆಗೆ ತಡೆಯಾಜ್ಞೆ ನೀಡಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ ಬುಧವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಂಡಿದೆ.
ಈ ವೇಳೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್ಎಫ್ಎ ನಖ್ವಿ, ಮಸೀದಿಗೆ ಯಾವುದೇ ಹಾನಿಯಾಗದಂತೆ ಕಾನೂನು ಪ್ರಕಾರ ಸರ್ವೆ ಮಾಡಲಾಗುವುದು ಎಂದು ಎಎಸ್ಐ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದು, ನಾವು ಉತ್ತರ ನೀಡುತ್ತೇವೆ. ನಾಳೆ ಮಧ್ಯಾಹ್ನ 3.30 ಕ್ಕೆ ನ್ಯಾಯಾಲಯವು ಮತ್ತೆ ವಿಚಾರಣೆ ನಡೆಸಲಿದೆ. ಸದ್ಯಕ್ಕೆ ಜಿಲ್ಲಾ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ತಡೆ ನೀಡಲಾಗಿದೆ.