ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ನಡೆದ ವೀಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಆಗಮಿಸಿದ್ದಾರೆ.
ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸ್ಟೂಡೆಂಟ್’ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕಾಲೇಜ್ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ ಎಂದರು.
ಮೊದಲು ಪ್ರಕರಣವನ್ನು ಸಂಪೂರ್ಣವಾಗಿ ನಾನುಅರಿತುಕೊಳ್ಳಬೇಕಾಗಿದೆ. ಕಾಲೇಜಿಗೆ ಭೇಟಿ ಕೊಡುತ್ತೇನೆ ಸಂತ್ರಸ್ತೆ, ವಿದ್ಯಾರ್ಥಿಗಳ ಜೊತೆ ಮಾತನಾಡುತ್ತೇನೆ ಎಂದು ಖುಷ್ಬು ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ.