ಹೊಸದಿಗಂತ ವರದಿ, ಕೊಪ್ಪಳ:
ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಪಕ್ಷ ಹೇಳಿಲ್ಲ. ಅದರ ಬಗ್ಗೆ ಚರ್ಚೆಯೂ ಆಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿ ಭದ್ರವಾಗಿದೆ. ಕಾಂಗ್ರೆಸ್ ಶಾಸಕರ ಆಪರೇಷನ್ ಊಹಾಪೋಹ. ಲೋಕಸಭಾ ಚುನಾವಣೆಯಲ್ಲಿ 15ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಚುನಾವಣೆ ವೇಳೆ ಪಕ್ಷ ನೀಡುವ ಎಲ್ಲ ಜವಾಬ್ದಾರಿ ಸಮರ್ಥವಾಗಿ ನಿರ್ವಹಿಸುವೆ ಎಂದರು.
ಜನಸಂಘದಲ್ಲಿ ಲಿಂಗಾಯತ ನಾಯಕರಿದ್ದಿಲ್ಲ. ಆ ಕಾಲದಲ್ಲಿ ನಾವು ಸಂಘದಲ್ಲಿ ಇದ್ದೇವೆ. ಅದಕ್ಕೆ ಬೇಕಾಗುವಷ್ಟು ಕೆಲಸ ಮಾಡಿ ಹಿಂತಿರುಗಿಸಿದ್ದೇವೆ. ಮತ್ತೆ ಬಿಜೆಪಿಗೆ ಹೋಗುವುದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಕಾಂಗ್ರೆಸ್ ಪಕ್ಷ ಗೆಲ್ಲಿಸಲು ಪ್ರಯತ್ನ ಮಾಡುತ್ತೇನೆ. ನನನ್ನು ಬಿಜೆಪಿ ಯಾವ ರೀತಿ ನಡೆಸಿಕೊಂಡರು ಎಂಬುದು ನಿಮಗೆಲ್ಲ ಗೊತ್ತಿದೆ. ಈಗ ಪ್ರೀತಿ ವಿಶ್ವಾಸದಿಂದ ಕಾಂಗ್ರೆಸ್ ನಡೆಸಿಕೊಳ್ಳುತ್ತಿದೆ. ಹಠಕ್ಕೆ ಬಿದ್ದು ಸೋಲಿಸಲು ಹೋಗಿ ರಾಜ್ಯದಲ್ಲಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡದಷ್ಟು ಶೋಚನಿಯ ಸ್ಥಿತಿಗೆ ಬಂದಿದೆ ಎಂದು ಕಿಡಿಕಾರಿದರು.