ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವರಿಗೆ ವಿಡಿಯೋ ಕಾಲ್ ಮೂಲಕ ಆಶ್ಲೀಲ ದೃಶ್ಯ ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಬಂಧಿತರು ರಾಜಸ್ಥಾನ ಮೂಲದವರು. ಆರೋಪಿಗಳು ಜೂನ್‌ನಲ್ಲಿ ಸಚಿವರಿಗೆ ವಾಟ್ಸಾಪ್‌ನಲ್ಲಿ ವಿಡಿಯೋ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಕೂಡಲೇ ಅಶ್ಲೀಲ ವಿಡಿಯೋ ಪ್ಲೇ ಆಗಿದೆ. ಇದರಿಂದ ಮುಜುಗರಕ್ಕೀಡಾದ ಸಚಿವರು ತಕ್ಷಣವೇ ಕರೆ ಸ್ಥಗಿತಗೊಳಿಸಿದ್ದಾರೆ.
ಈದಾದ ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಈ ವಿಡಿಯೋ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಜೂನ್ ತಿಂಗಳಿನಲ್ಲಿ ದೂರು ದಾಖಲಾಗಿದ್ದು, ತನಿಖೆಯ ಬಳಿಕ ಜುಲೈ ತಿಂಗಳಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವರಿಗೆ ಬೆದರಿಕ ಹಾಕಿದ ಘಟನೆಯ ಬಗ್ಗೆ ಇನ್ನಷ್ಟು ತನಿಖೆ ಮುಂದುವರೆದಿದ್ದು, ಘಟನೆಯಲ್ಲಿ ಭಾಗಿಯಾದ ಇತರರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.