ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ.
ಈ ಯೋಜನೆಗಾಗಿ ಸರ್ಕಾರ ಸುಮಾರು 8.5 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಈ ಯೋಜನೆಯ ಘಲಾನುಭವಿಗಳಾದ ರೈತರ ಖಾತೆಗೆ ಇಂದು ಹಣ ಜಮಾ ಆಗಲಿದ್ದು, ಸಂಜೆ ವೇಳೆಗೆ ರೈತರು ತಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬಹುದು.
ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ಪ್ರತಿ ಕಂತಿನಲ್ಲೂ 2000 ರೂ. ಹಣ ನೀಡಲಾಗುತ್ತದೆ. ಒಂದು ವರ್ಷದಲ್ಲಿ ಒಟ್ಟು 6000 ರೂ. ಹಣವನ್ನು ಫಲಾನುಭವಿ ಪಡೆಯುತ್ತಾರೆ.
ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತನ್ನು ಆಧಾರ್ ಮತ್ತು ನ್ಯಾಷನಲ್ ಪೇಮೆಂಟ್ ಕಾರ್ಪರೇಷನ್ ಆಫ್ ಇಂಡಿಯಾ (ಎನ್ಪಿಸಿಐ ಅಥವಾ ಇ-ಕೆವೈಸಿ) ಎರಡಕ್ಕೂ ಜೋಡಿಸಲಾದ ಬ್ಯಾಂಕ್ ಖಾತೆಗೆ ಹಣ ಪಾವತಿ ಮಾಡಲಾಗುತ್ತದೆ.
ಕೇಂದ್ರ ಸರ್ಕಾರವು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಆರ್ಥಿಕವಾಗಿ ನೆರವಾಗುವ ದೃಷ್ಟಿಯಿಂದ 2019ರಲ್ಲಿ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ.