ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಇದೀಗ ಮತ್ತೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ಇದೀಗ ಉಡುಪಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ಉಡುಪಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟಿಸುತ್ತಿದ್ದಾರೆ. ಸೂಕ್ತ ತನಿಖೆ ನಡೆಸಿ ನ್ಯಾಯ ನೀಡಿ ಎಂದು ಮನವಿ ಮಾಡುತ್ತಿದ್ದಾರೆ.
ಈಗಾಗಲೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಬಂದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತನಿಖೆ ನಡೆಯುತ್ತಿದೆ, ಒಂದೇ ದಿನದಲ್ಲಿ ನಿರ್ಧಾರ ಮಾಡಲು ಆಗುವುದಿಲ್ಲ, ಇದರ ಬಗ್ಗೆ ವದಂತಿಗಳನ್ನು ಯಾರೂ ಹರಡುವಂತಿಲ್ಲ. ನಮ್ಮ ರಾಜ್ಯದಲ್ಲಿ ಎಲ್ಲ ಹೆಣ್ಣುಮಕ್ಕಳು ಸುರಕ್ಷಿತವಾಗಿರಬೇಕು ಇದೇ ನಮ್ಮ ಧ್ಯೇಯ ಎಂದಿದ್ದಾರೆ.