ಹೊಸದಿಗಂತ ವರದಿ ಮಂಗಳೂರು :
ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ನಿನ್ನೆ ಸಂಜೆ ಉಡುಪಿಗೆ ಖುಷ್ಬೂ ಸುಂದರ್ ಆಗಮಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ಎಸ್‌ಪಿ ಜತೆ ಮಾತುಕತೆ ನಡೆಸಿದ್ದಾರೆ. ಹೆಣ್ಣುಮಕ್ಕಳ ರಕ್ಷಣೆ ನಮ್ಮ ಹೊಣೆಯಾಗಿದೆ, ಸಂಪೂರ್ಣ ತನಿಖೆಗೆ ಸಮಯ ಬೇಕು, ವದಂತಿಗಳನ್ನು ಹಬ್ಬಿಸಬೇಡಿ ಜತೆಗೆ ಪ್ರಕರಣವನ್ನು ರಾಜಕೀಯಕ್ಕಾಗಿ ಬಳಸಬೇಡಿ ಎಂದು ಹೇಳಿದ್ದಾರೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚೀಂದ್ರ ಹಾಗೂ ಆಯೋಗ ಇತರ ಅಧಿಕಾರಿಗಳ ಜತೆ ಕಾಲೇಜಿಗೆ ಭೇಟಿ ನೀಡಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಜತೆಗಿದ್ದರು.
ವಿಡಿಯೋ ಪ್ರಕರಣಕ್ಕೆ ಇಡೀ ರಾಜ್ಯವೇ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಹಾಗೂ ಉಡುಪಿಯಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ.