ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಕಾರೊಂದು ಉರುಳಿ ಬಿದ್ದಿದ್ದು, ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯದ ತಿಬ್ಬನಹಳ್ಳಿಯಲ್ಲಿ ನಡೆದಿದೆ. ಚಾಲಕನಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ ನಾಪತ್ತೆಯಾಗಿರುವ ಚಾಲಕ.
ಲೋಕೇಶ್ ಕಾರು ಚಲಿಸಿಕೊಂಡು ಬರುವ ವೇಳೆ, ಕಾರು ನಿಯಂತ್ರಣ ತಪ್ಪಿ ಪಕ್ಕದಲ್ಲಿಯೇ ತುಂಬಿ ಹರಿಯುತ್ತಿದ್ದ ನಾಲೆಯೊಳಗೆ ಬಿದ್ದಿದೆ. ಕಾಲುವೆಗೆ ತಡೆಗೊಡೆ ಇಲ್ಲದ ಕಾರಣ ಕಾರು ಕಾಲುವೆಗೆ ಬಿದ್ದಿದೆ.
ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಾಪತ್ತೆಯಾದ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಈಜುಗಾರರ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದ್ದು, ನಾಪತ್ತೆಯಾದ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.