ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ 14 ಕಲ್ಯಾಣ ಸಂಘಟಿಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಭೂಸೇನೆಯ ಜೆಸಿಒ ರ್ಯಾಂಕ್‌ನಲ್ಲಿ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‌ನಿಂದ 15 ವರ್ಷ ಸೇವೆಯ ನಂತರ ನಿವೃತ್ತಿ ಹೊಂದಿರುವ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೊತೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು 50 ವರ್ಷ ವಯೋಮಿತಿಯೊಳಗಿರಬೇಕು.
ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025.