ಹೊಸದಿಗಂತ ವರದಿ ಕಲಬುರಗಿ:
ನಸುಕಿನ ಜಾವ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಚಿನ್ನಾಭರಣದ ಅಂಗಡಿಯನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವದಲ್ಲಿ ನಡೆದಿದೆ.
ಪಟ್ಟಣದ ಸಂತೋಷ್ ಮಾಳಿ ಎಂಬುವರಿಗೆ ಸೇರಿದ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನ ನಡೆದಿದೆ. (ಜು.27ರ ) ರಂದು ನಸುಕಿನ ಜಾವ 3.30ರ ಸಮಯದಲ್ಲಿ ಜಾಗಿಂಗ್ ಸ್ಟೈಲ್ ನಲ್ಲಿ ಬಂದಿದ್ದ ಇಬ್ಬರು ಕಳ್ಳರು, ಅಂಗಡಿಯ
ಶೆಟರ್ ಮುರಿದು ಒಳ್ಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ಖತರ್ನಾಕ ಕಳ್ಳರ ಕಳ್ಳತನದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಿತಾಪುರಿನ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.