ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ನಡೆಯುವ ʼಸೆಮಿಕಾನ್ ಇಂಡಿಯಾ 2023ʼ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗುಜರಾತ್‌ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಇದಾಗಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಭಾರತದ ಸೆಮಿಕಂಡಕ್ಟರ್ ತಂತ್ರ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಪ್ರದರ್ಶಿಸಲು ಆಯೋಜಿಸಿದೆ.
ಸಮ್ಮೇಳನದ ವಿಷಯವು ‘ಕ್ಯಾಟಲೈಸಿಂಗ್ ಇಂಡಿಯಾಸ್ ಸೆಮಿಕಂಡಕ್ಟರ್ ಇಕೋಸಿಸ್ಟಮ್’ ಆಗಿದೆ. ಈ ಸಮಾವೇಶವು ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.