ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇಂದು ಬೆಳಿಗ್ಗೆ 8:50ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ ಎಂದು ವರದಿಯಾಗಿದೆ.
ಘಟನೆಯಿಂದಾಗಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿರುವುದರ ಬಗ್ಗೆ ತಿಳಿದುಬಂದಿಲ್ಲ.