ಹೊಸದಿಗಂತ ವರದಿ ಹುಬ್ಬಳ್ಳಿ:
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ ಪ್ರಮಾಣದ ಮನೆಗಳು, ಬೆಳೆ ಹಾಗೂ ಜಾನವಾರುಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕುಂದಗೋಳ ತಾಲೂನಿನ ಶೆರೆವಾಡ ಗ್ರಾಮದಲ್ಲಿ ಮನೆ ಕುಸಿತವಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಪರಿಶೀಲಿಸಿ, ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು.
ಶೆರೆವಾಡ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಹನುಮಂತಪ್ಪ ಮತ್ತಿಗಟ್ಟಿಯವರ ಮನೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಮನೆಹಾನಿಯಾಗಿರುವುದನ್ನು ವೀಕ್ಷಿಸಿದರು.
ಈ ವೇಳೆ ಅವರೊಂದಿಗೆ ಶಾಸಕರಾದ ಎಂ ಆರ್ ಪಾಟೀಲ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಮುಖಂಡರಾದ ಅನಿಲಕುಮಾರ ಪಾಟೀಲ ಮತ್ತು ನಾಗರಾಜ ಗೌರಿ ಇದ್ದರು.