ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರ ಅಕ್ಷಯ್ ಕುಮಾರ್ (26) ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ.
ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ನೀಡಿದ ದೂರಿನನ್ವಯ ಆರೋಪಿ ಅಕ್ಷಯ್ ಕುಮಾರ್ ನನ್ನು ಬಂಧಿಸಲಾಗಿದೆ.
ಆತ್ಮೆಹತ್ಯೆಗೆ ಶರಣಾದ ವಿದ್ಯಾಶ್ರೀ ಮನೆಯಲ್ಲಿ ಡೈರಿ ಲಭ್ಯವಾಗಿದ್ದು, ಅದರಲ್ಲಿರುವ ಡೆತ್ ನೋಟ್‌ನಲ್ಲಿ ಪ್ರಿಯಕರ ಅಕ್ಷಯ್ ಕುಮಾರ್ ಹೆಸರನ್ನು ಉಲ್ಲೇಖಿಸಲಾಗಿದೆ. ಪ್ರಾಥಮಿಕ ತನಿಖೆಯ ವೇಳೆ ಈ ವಿಷಯ ಬೆಳಕಿಗೆ ಬಂದಿದ್ದು, ಇದೀಗ ಅಕ್ಷಯ್‌ನನ್ನು ಬಂಧಿಸಲಾಗಿದೆ.
ಮಾಡೆಲಿಂಗ್ ಜೊತೆಗೆ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ವಿದ್ಯಾಶ್ರೀ, ಫೇಸ್‌ಬುಕ್ ಮೂಲಕ ಪರಿಚಯವಾದ ಜಿಮ್ ಟ್ರೈನರ್ ಅಕ್ಷಯ್ ಎಂಬಾತನೊಂದಿಗಿನ ಸ್ನೇಹ ಪ್ರೀತಿಗೆ ತಿರುಗಿದೆ. ಬಳಿಕ ಅವರಿಬ್ಬರ ಪ್ರೀತಿಯಲ್ಲಿ ಬಿರುಕು ಉಂಟಾಗಿದೆ. ಇದರಿಂದ ಮನನೊಂದ ವಿದ್ಯಾಶ್ರೀ ಜುಲೈ 21,2023ರಂದು ಆತ್ಮಹತ್ಯೆಗೆ ಶರಣಾಗಿದ್ದರು.
ಮಗಳ ಸಾವಿಗೆ ಅಕ್ಷಯ್ ಕಾರಣ ಎಂದು ಗೊತ್ತಾದ ಬಳಿಕ ತಾಯಿ ದೂರು ನೀಡಿದ್ದು, ಇದೀಗ ಅಕ್ಷಯ್ ನನ್ನು ಬಂಧಿಸಲಾಗಿದೆ.