ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

2022-23ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಯು ಆಗಸ್ಟ್ 21ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 2ರಂದು ಮುಕ್ತಾಯವಾಗಲಿದೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ
2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.

ಫಲಿತಾಂಶ ತಿರಸ್ಕರಿಸಲು ಸದರಿ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ ಎಂಬುದನ್ನು ನೆನಪಿಡಬೇಕು.

ಪರೀಕ್ಷೆಗೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ https://kseab.karnataka.gov.in ಪ್ರಕಟಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಿಸಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಹೇಳಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ:

ಆಗಸ್ಟ್ 21,2023 : ಕನ್ನಡ
ಆಗಸ್ಟ್ 22,2023 : ರಸಾಯನಶಾಸ್ತ್ರ
ಆಗಸ್ಟ್ 23,2023 : ಸಮಾಜ ಶಾಸ್ತ್ರ,
ಆಗಸ್ಟ್ 24,2023 : ವ್ಯವಹಾರ ಅಧ್ಯಯನ
ಆಗಸ್ಟ್ 25,2023 : ಇತಿಹಾಸ
ಆಗಸ್ಟ್ 26,2023 : ಇಂಗ್ಲೀಷ್‌
ಆಗಸ್ಟ್ 28,2023 : ಭೌತಶಾಸ್ತ್ರ, ಮನಃಶಾಸ್ತ್ರ
ಆಗಸ್ಟ್ 29,2023 : ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ
ಆಗಸ್ಟ್ 30,2023 : ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಆಗಸ್ಟ್ 31,2023 : ಹಿಂದಿ
ಸೆಪ್ಟೆಂಬರ್ 01,2023 : ಅರ್ಥಶಾಸ್ತ್ರ, ಜೀವಶಾಸ್ತ್ರ
ಸೆಪ್ಟೆಂಬರ್ 02,2023 : ತೆಲುಗು, ತಮಿಳು, ಉರ್ದು ಇತರ ಭಾಷೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!