ಫಿಲಿಪೈನ್ಸ್‌ನಲ್ಲಿ ದೋಣಿ ಮುಳುಗಡೆ: 26 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಮುಳುಗಡೆಯಾದ ಪರಿಣಾಮ 26 ಮಂದಿ ಸಾವನ್ನಪ್ಪಿರುವ ಘಟನೆ ಫಿಲಿಪೈನ್ಸ್‌ ರಾಜಧಾನಿ ಸಮೀಪದ ಸರೋವರದಲ್ಲಿ ಗುರುವಾರ ನಡೆದಿದೆ.

ಗುರುವಾರ ಮಧ್ಯರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಬಲವಾದ ಗಾಳಿಯಿಂದಾಗಿ ಯಾಂತ್ರೀಕೃತ ದೋಣಿ ಒಂದು ಕಡೆಗೆ ವಾಲಿತ್ತು. ಇದರಿಂದ ಭಯಭೀತರಾದ ಪ್ರಯಾಣಿಕರು ದೋಣಿಯ ಒಂದೇ ಕಡೆ ಗುಂಪುಗೂಡಿದರು. ಇದರ ಪರಿಣಾಮ ದೋಣಿ ಸಮತೋಲನ ಕಳೆದುಕೊಂಡು ಮಗುಚಿ ನೀರಿನಲ್ಲಿ ಮುಳುಗಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಸುಮಾರು 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಈಜಿ ಸೇರಿದ್ದಾರೆ, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ ಎಂದು ಫಿಲಿಪ್ಪೀನ್ಸ್‌ ಕರಾವಳಿ ರಕ್ಷಣಾ ಪಡೆ ತಿಳಿಸಿದೆ.

ಘಟನಾ ಸ್ಥಳದಲ್ಲಿ ಫಿಲಿಪೈನ್ಸ್‌ ಕರಾವಳಿ ರಕ್ಷಣಾ ಪಡೆಯಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ದುರಂತದಲ್ಲಿ ಮೃತಪಟ್ಟವರ ಹಾಗೂ ಗಾಯಗೊಂಡವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಫಿಲಿಪೈನ್ಸ್‌ ಅಧಿಕೃತ ಮಾಧ್ಯಮ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!