ಉಡುಪಿ ವಿಡಿಯೋ ವಿವಾದ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ಹೊಸದಿಗಂತ ವರದಿ ಮಂಡ್ಯ :

ಉಡುಪಿಯ ಜ್ಯೋತಿ ನರ್ಸಿಂಗ್ ಕಾಲೇಜಿನಲ್ಲಿ ಹಿಂದೂ ಹೆಣ್ಣು ಮಕ್ಕಳ ವೈಯಕ್ತಿಕ ಚಿತ್ರ ತೆಗೆದ ಮೂವರು ಮುಸ್ಲಿಂ ಹೆಣ್ಣು ಮಕ್ಕಳನ್ನು ಕೂಡಲೇ ಬಂಧಿಸುವುದರ ಜೊತೆಗೆ ಪ್ರಕರಣನ್ನು ಸಿಒಡಿ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕಾರ‌್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕಾರ‌್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಉಡುಪಿಯ ಜ್ಯೋತಿ ನರ್ಸಿಂಗ್ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಟ್ಟು, ಹಿಂದೂ ಹೆಣ್ಣು ಮಕ್ಕಳ ವೈಯಕ್ತಿಕ ಚಿತ್ರಗಳನ್ನು ತೆಗೆದ ಮೂರು ಮುಸ್ಲೀಂ ಹೆಣ್ಣು ಮಕ್ಕಳ ವಿರುದ್ಧ ಉಡುಪಿ ಪೊಲೀಸರು ಕೇವಲ ಎಫ್‌ಐಆರ್ ದಾಖಲಿಸಿದ್ದು, ಆ ಮೂವರು ಆರೋಪಿಗಳಾದ ಮುಸ್ಲೀಂ ಹೆಣ್ಣು ಮಕ್ಕಳನ್ನು ಈವರೆವಿಗೂ ಬಂಧಿಸಿಲ್ಲ ಎಂದು ದೂರಿದರು.

ಈ ಪ್ರಕರಣದ ಹಿಂದೆ ದೇಶ ವಿರೋಧಿ ಹಿಂದೂ ಸಂಘಟನೆಗಳ ಕೈವಾಡವಿದ್ದು, ಚಿತ್ರೀಕರಣ ಮಾಡಿದ ವಿಡಿಯೋಗಳನ್ನು ಕೆಲ ಯುವಕರಿಗೆ ರವಾನಿಸಿರುವ ಬಗ್ಗೆ ಅನುಮಾನ ಇದ್ದು, ಈ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸದರಿ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕು. ಪ್ರಕರಣ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿ ಇದರ ವಿರುದ್ಧ ಯಾರೇ ಇದ್ದರೂ ಅವರಿಗೆ ಸೂಕ್ತ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಶೋಧಮ್ಮ, ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ, ಮನ್‌ಮುಲ್ ನಿರ್ದೇಶಕಿ ರೂಪ, ಮಾಜಿ ನಿರ್ದೇಶಕಿ ಸುಜಾತ ಕೃಷ್ಣ, ಮುಖಂಡರಾದ ಮಮತಾ, ನಗರಾಧ್ಯಕ್ಷ ವಿವೇಕ್, ಸಿ.ಟಿ. ಮಂಜುನಾಥ್, ಶಶಿ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!