ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನರಿಗೆ ಹಲವು ಗ್ಯಾರಂಟಿ ಆಮಿಷ ನೀಡಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದ ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠದಿಂದ ಎಮರ್ಜೆಂಟ್ ನೋಟಿಸ್ ಜಾರಿ ಮಾಡಿದೆ.
ಸಿಎಂ ಸಿದ್ಧರಾಮಯ್ಯ ಅವರ ಶಾಸಕ ಸ್ಥಾನವನ್ನು ಅನೂರ್ಜಿತ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಕ್ರಿಯೆಯ ಶುದ್ಧತೆಯನ್ನು ಹಾಳುಮಾಡುವ ಅಥವಾ ಮತದಾರರ ಮೇಲೆ ಅನಗತ್ಯ ಪ್ರಭಾವ ಬೀರುವಂತ ಗ್ಯಾರಂಟಿ ಘೋಷಣೆಗಳನ್ನು ಪ್ರಕಟ ಮಾಡಿತ್ತು. ವರುಣಾ ಕ್ಷೇತ್ರದ ಮತದಾರ ಕೆ.ಎಂ.ಶಂಕರ ಸಲ್ಲಿಸಿದ್ದ ಅರ್ಜಿ ಶುಕ್ರವಾರ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರ ಪೀಠ ನಡೆಸಿದ್ದು, ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಜೊತೆಗೆ, ಪ್ರಕರಣವನ್ನು ಸೆ.1ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.