ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಶನಿವಾರ ಬೆಳಗ್ಗೆ ಭಾರೀ ಭೂಕಂಪ ಸಂಭವಿಸಿದೆ. ಶನಿವಾರ ಮುಂಜಾನೆ ಪೋರ್ಟ್ ಬ್ಲೇರ್ ಬಳಿ ಸಂಭವಿಸಿದ ಭೂಕಂಪವು ರಿಕ್ಟರ್ ಮಾಪಕದಲ್ಲಿ ತೀವ್ರತೆ 5.8 ರಷ್ಟಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಪೋರ್ಟ್ ಬ್ಲೇರ್ ನಿಂದ 126 ಕಿ.ಮೀ ದೂರದಲ್ಲಿ 69 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ. ಭೂಕಂಪದಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಜನ ಜೀವ ಭಯದಲ್ಲಿದ್ದಾರೆ. ಪದೇ ಪದೇ ಸಂಭವಿಸುವ ಭೂಕಂಪಗಳಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಜನರು ತೀವ್ರವಾಗಿ ಕಂಗಾಲಾಗಿದ್ದಾರೆ.