ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಲೇಕಸಭೆ ಚುನಾವಣೆ ಮತ್ತು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯ ಎದುರಿಗಿರುವಾಗ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಜವಾಬ್ದಾರಿಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ.
ಕರ್ನಾಟಕದಿಂದ ಸಿ ಟಿ ರವಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ. ಅಸ್ಸಾಂ ಸಂಸದ ದಿಲೀಪ್ ಸೈಕಿಯಾ ಸಹ ಕೇಂದ್ರದ ಸಂಘಟನಾ ವ್ಯವಸ್ಥೆಯಿಂದ ಹೊರಬಿದ್ದಿದ್ದಾರೆ. ಬಿ ಎಲ್ ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ತೆಲಂಗಾಣದಲ್ಲಿ ಇತ್ತೀಚೆಗೆ ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಬಂಡಿ ಸಂಜಯ ಕುಮಾರ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಇತ್ತೀಚಿನ ಮಾತುಗಳಲ್ಲಿ ಪಸ್ಮಂದ ಮುಸ್ಲಿಂ ಸಮುದಾಯದ ಅಭ್ಯುದಯದ ಬಗ್ಗೆ ಹಲವು ಬಾರಿ ಕಾಳಜಿ ವ್ಯಕ್ತಪಡಿಸಿದ್ದರು. ಇದೀಗ, ಅದೇ ಸಮುದಾಯಕ್ಕೆ ಸೇರಿದ ಉತ್ತರ ಪ್ರದೇಶದ ಎಂಎಲ್ಸಿ ತಾರೀಖ್ ಮನ್ಸೂರ್ ಅವರಿಗೆ ಬಿಜೆಪಿ ಉಪಾಧ್ಯಕ್ಷ ಹುದ್ದೆ ನೀಡಲಾಗಿದೆ. ಇತ್ತೀಚೆಗೆ ಬಿಜೆಪಿ ಸೇರ್ಪಡೆ ಆಗಿದ್ದ ಅನಿಲ್ ಆ್ಯಂಟನಿ ಸಹ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಹೊಸ ತಂಡದಲ್ಲಿ ಪ್ರವೇಶ ಪಡೆದಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಸ್ಥರದ ಸಂಘಟನಾ ತಂಡವು ಒಟ್ಟು 13 ಉಪಾಧ್ಯಕ್ಷರು, 9 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ13 ಕಾರ್ಯದರ್ಶಿಗಳನ್ನು ಹೊಂದಿದೆ.
ಆಯ್ಕೆಯಾದವರ ಪಟ್ಟಿ ಇಂತಿದೆ..
भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30
— BJP (@BJP4India) July 29, 2023