ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರಾ ಎಂಬ ವಿಷಯಕ್ಕಿಂತ ಅವರು ಮದುವೆ ಆಗ್ತಾರಾ ಅನ್ನೋ ಬಗ್ಗೆಯೇ ಹೆಚ್ಚು ಪ್ರಶ್ನೆಗಳು, ಚರ್ಚೆಗಳು ನಡೆಯುತ್ತಿವೆ. ಈ ವಿಷಯವನ್ನು ಹಲವಾರು ಸಂದರ್ಭಗಳಲ್ಲಿ ಪ್ರಸ್ತಾಪಿಸಲಾಗಿದೆ. ಈ ಹಿಂದೆಯೇ ರಾಗಾ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದರೂ ಈ ಪ್ರಶ್ನೆ ಮತ್ತೆ ಮತ್ತೆ ಉದ್ಭವಿಸುತ್ತಲೇ ಇದೆ. ಕೆಲ ದಿನಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಮೊದಲ ಸಭೆಯಲ್ಲಿ ಲಾಲು ಪ್ರಸಾದ್ ಯಾದವ್ ಅವರು ರಾಹುಲ್ ಗಾಂಧಿಯವರೊಂದಿಗೆ “ಈಗ ಮದುವೆಯಾಗು.. ನಿಮ್ಮ ತಾಯಿ ತುಂಬಾ ನೋವಲ್ಲಿದ್ದಾರೆ” ಎಂದು ಹೇಳಿದ್ದರು.
ಇತ್ತೀಚೆಗಷ್ಟೇ ಸೋನಿಯಾ ಗಾಂಧಿಗೂ ಇದೇ ಪ್ರಶ್ನೆ ಎದುರಾಗಿದೆ. ಹರಿಯಾಣದ ಸೋನಿಪತ್ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರು ಕೆಲವು ಮಹಿಳಾ ರೈತರೊಂದಿಗೆ ತೋಟವನ್ನು ನೆಟ್ಟಿದ್ದು ಗೊತ್ತೇ ಇದೆ. ಆದರೆ ಇತ್ತೀಚೆಗಷ್ಟೇ ರಾಹುಲ್ ಅವರನ್ನು ದೆಹಲಿಯಲ್ಲಿರುವ ತನ್ನ ತಾಯಿಯ ಮನೆಗೆ ಕರೆಸಿಕೊಂಡಿದ್ದ. ರಾಹುಲ್, ಪ್ರಿಯಾಂಕಾ ಮತ್ತು ಸೋನಿಯಾ ಆ ರೈತರೊಂದಿಗೆ ಕೆಲ ಕಾಲ ಮಾತನಾಡಿ, ಹಾಡಿ ಕುಣಿದು ಕುಪ್ಪಳಿಸಿದರು. ಈ ಸಂದರ್ಭದಲ್ಲಿ ರೈತ ಮಹಿಳೆಯೊಬ್ಬರು ‘ರಾಹುಲ್ ಗಾಂಧಿ ಮದುವೆಯಾಗುತ್ತಾರಾ?’ ಎಂದು ಸೋನಿಯಾ ಅವರನ್ನು ಪ್ರಶ್ನಿಸಿದ್ದಾರೆ. ಕೂಡಲೇ ಸೋನಿಯಾ ‘ಅವನಿಗೊಂದು ಹುಡುಗಿ ತೋರಿಸು’ ಎಂದು ಉತ್ತರಿಸಿದರು.
ಮಹಿಳಾ ರೈತರೊಂದಿಗೆ ಸೋನಿಯಾ ಮತ್ತು ಪ್ರಿಯಾಂಕಾ ಡ್ಯಾನ್ಸ್ ಮಾಡಿದ ವಿಡಿಯೋವನ್ನು ರಾಹುಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.