ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟವಾಗಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಸ್ಫೋಟದಿಂದಾಗಿ ಕಟ್ಟಡ ಕುಸಿದಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಟಾಕಿ ಗೋದಾಮಿನ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕಾ ಹಾಗೂ ರುತೀಶ್ ಮೃತಪಟ್ಟಿದ್ದಾರೆ. ಇನ್ನು ಪಕ್ಕದಲ್ಲಿಯೇ ಇದ್ದ ರೆಸ್ಟೋರೆಂಟ್‌ನ ರಾಜೇಶ್ವರಿ, ವೆಲ್ಡಿಂಗ್ ಶಾಪ್‌ನ ಇಬ್ರಾಹಿಂ ಹಾಗೂ ಇಬ್ರಾಹಿಂದ ಮತ್ತು ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.