ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ವಿಡಿಯೋ ವಿವಾದದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದೆ. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್ಪಿ ಅಕ್ಷಯ್ ನೇಮಕ ಮಾಡಿದ್ದಾರೆ.
ಆರಂಭದಿಂದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅದರಂತೆಯೇ ಇದೀಗ ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪರಿಗೆ ತನಿಖೆ ವಹಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪ್ರಕರಣ ಮತ್ತು ಶಿರೂರು ಸ್ವಾಮೀಜಿ ಸಾವು ಪ್ರಕರಣದಲ್ಲೂ ದಕ್ಷ ತನಿಖಾಧಿಕಾರಿಯಾಗಿ ಬೆಳ್ಳಿಯಪ್ಪ ಅವರು ಕಾರ್ಯನಿರ್ವಹಿಸಿದ್ದರು.