ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ತಂತಿ ತಗುಲಿ ವೃದ್ಧೆಯೊಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
80 ವರ್ಷದ ವೃದ್ಧೆಯೊಬ್ಬರು ಆಕಸ್ಮಿಕವಾಗಿ ತಮ್ಮ ಬಾಲ್ಕನಿಯಲ್ಲಿದ್ದ ಹೈಟೆನ್ಶನ್ ವಿದ್ಯುತ್ ತಂತಿಗಳನ್ನು ಸ್ಪರ್ಶಿಸಿದ್ದಾರೆ. ಕೂಡಲೇ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೆಂಕಿ ವೃದ್ಧೆಯ ದೇಹವನ್ನಾವರಿಸಿತು. ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಠಾಣೆ ಎದುರು ಪ್ರತಿಭಟನೆ ನಡೆಸಿದರು. ಬೆಂಕಿಯಲ್ಲಿ ವೃದ್ಧೆ ಸಜೀವ ದಹನವಾಗಿರುವ ಘಟನೆಯನ್ನು ಕಂಡ ಸ್ಥಳೀಯರು ಭಯಭೀತರಾಗಿದ್ದಾರೆ.