ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಉದ್ಯೋಗ್ ನಗರದ ಶೂ ತಯಾರಿಕಾ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ಅಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಉದ್ಯೋಗ್ ನಗರ ಪ್ರದೇಶದ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ಗೊತ್ತಾದ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಂತೆ ಕಾರ್ಖಾನೆಯಿಂದ ದಟ್ಟವಾದ ಹೊಗೆ ಹೊರಹೊಮ್ಮಿದೆ.
ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹಾಗೂ ಈ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳಾಗಿರುವುದು ಇನ್ನೂ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.