ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಕೆಎನ್ ರಾಜಣ್ಣ ಅವರು ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಶನಿವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಜಣ್ಣ ಡಿಕೆಶಿ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ನವೆಂಬರ್ ಕ್ರಾಂತಿಯ ಬಗ್ಗೆ ಮೊದಲು ಬಾಂಬ್ ಸಿಡಿಸಿದ್ದ ರಾಜಣ್ಣ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಿವಕುಮಾರ್ ಮುಖ್ಯಮಂತ್ರಿಯಾಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರು.

