ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರ್ಯಾಣದ ನುಹ್ನಲ್ಲಿ ಕೋಮು ಘರ್ಷಣೆಯಿಂದಾಗಿ ಮೂವರು ಮೃತಪಟ್ಟಿದ್ದಾರೆ.
ವಿಶ್ವ ಹಿಂದೂ ಪರಿಷತ್ನ ಮೆರವಣಿಗೆಯನ್ನು ತಡೆಯಲು ಯತ್ನಿಸಿದ್ದು, ಈ ವೇಳೆ ಹಿಂಸಾಚಾರ ಆರಂಭವಾಗಿದೆ. ಈ ಕೋಮು ಘರ್ಷಣೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ಏಕಾಏಕಿ ಹೆಚ್ಚಾಗಿದ್ದು, ಸಿಕ್ಕ ಸಿಕ್ಕ ವಾಹನಗಳಿಗೆ, ಜನರಿಗೆ ಕಲ್ಲು ತೂರಿದ್ದಾರೆ.
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ವಿಶ್ವ ಹಿಂದೂ ಪರಿಷತ್ನ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಗುರುಗ್ರಾಮ-ಆಳ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪೊಂದು ತಡೆದಿತ್ತು. ಇಲ್ಲಿಂದ ಘರ್ಷಣೆ ಆರಂಭವಾಗಿದೆ.
ಯಾತ್ರೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದು, ಭಯಕ್ಕೆ ಪಕ್ಕದಲ್ಲಿಯೇ ಇದ್ದ ದೇಗುಲದಲ್ಲಿ ಜನರು ಆಶ್ರಯ ಪಡೆದಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೂ ದೇಗುಲದಲ್ಲೇ ಇದ್ದು, ತದನಂತರ ಅವರನ್ನು ಪೊಲೀಸರು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ.