ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ಮಂಜುಳಾ(21) ಮೃತ ದುರ್ದೈವಿ. ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಇವರ ಪೈಕಿ ತೀವ್ರ ಗಂಭೀರಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ನಗರಸಭೆಯಿಂದ ಸರಬರಾಜು ಮಾಡುವ ನೀರು ಕಲುಷಿತಗೊಂಡಿದ್ದು ನೀರಿನ ಟ್ಯಾಂಕ್ ತೊಳೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರಸಭೆ ಅಧಿಕಾರಿಗಳ ವಿರುದ್ಧ ಕವಾಡಿಗರಹಟ್ಟಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.