ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.
ಎತ್ತಿನಭುಜ ಪ್ರವಾಸಿ ತಾಣಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.