ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಪಟು ಬಜರಂಗ್ ಪೂನಿಯಾಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕುಸ್ತಿ ತರಬೇತುದಾರ ನರೇಶ್ ದಹಿಯಾ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ಗುರುವಾರ ಪೂನಿಯಾಗೆ ಸಮನ್ಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 6 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುನಿಯಾ ಅವರಿಗೆ ನಿರ್ದೇಶನ ನೀಡಲಾಗಿದೆ.