ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಮುಂಬೈನ ಕಂಡಿವಲಿ ಪ್ರದೇಶದ ಆರ್ಕಿಡ್ ಕಟ್ಟಡದ 16ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಿದ್ದಾರೆ.
ಈ ಘಟನೆಯಲ್ಲಿ ಯಾವುದೇ ಹಾನಿಯಾಗಿರುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.