ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಎಸ್ಐ ನೇಮಕಾತಿ ಅಕ್ರಮ(545 PSI Recruitment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (Karnataka High Court) ಮಹತ್ವದ ಅಭಿಪ್ರಾಯಪಟ್ಟಿದೆ.
ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಇಂದು (ಆಗಸ್ಟ್ 04) ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಲ್ನೋಟಕ್ಕೆ ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಪಿಎಸ್ಐ ನೇಮಕಾತಿ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್.ದಿನೇಶ್ ಕುಮಾರ್, ನ್ಯಾ.ಟಿ.ಜಿ.ಶಿವಶಂಕರೇಗೌಡರಿದ್ದ ವಿಭಾಗೀಯ ಪೀಠ, ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ. ಬಳಿಕ ಅರ್ಜಿದಾರರ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದರು. ಇದರಿಂದ ಕೋರ್ಟ್, ವಿಚಾರಣೆ ಆ.7ಕ್ಕೆ ಮುಂದೂಡಿದೆ.