ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ಉಪನಾಮ (Modi Surname Remark) ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court)ತೀರ್ಪನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ , ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ. ಭಾರತದ ಕಲ್ಪನೆಯನ್ನು ರಕ್ಷಿಸಿ ಎಂದು ಪ್ರತಿಕ್ರಿಯಿಸಿದ್ದಾರೆ.
ಇದಕ್ಕೂ ಮೊದಲು ಕಾಂಗ್ರೆಸ್, ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು. ಸತ್ಯಮೇವ ಜಯತೆ.. ಜೈ ಹಿಂದ್ ಎಂದು ಟ್ವೀಟ್ ಮಾಡಿತ್ತು.
ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿ ತೀರ್ಪು ಪ್ರಕಟಿಸಿತು.