ಹೊಸದಿಗಂತ ವರದಿ,ಮಡಿಕೇರಿ:
ಬೀದಿ ನಾಯಿ ಕಚ್ಚಿದ ಪರಿಣಾಮ ತರಕಾರಿ ವ್ಯಾಪಾರಿಯೊಬ್ಬರು ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.
ವೀರಾಜಪೇಟೆ ತೆಲುಗರ ಬೀದಿ ನಿವಾಸಿ ಅಯ್ಯು ಗೋಪಿ (65)/ಮೃತ ದುರ್ದೈವಿ.
ವೀರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಸಮೀಪ ತರಕಾರಿ ವ್ಯಾಪಾರ ಮಾಡುತ್ತಿದ್ದ ಇವರಿಗೆ ಕಳೆದ ಎಂಟು ದಿನಗಳ ಹಿಂದೆ ಬೀದಿ ನಾಯಿಯೊಂದು ಕಚ್ಚಚಿತ್ತು.
ಗುರುವಾರ ವೀರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಶುಕ್ರವಾರ ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವಿಗೀಡಾಗಿದ್ದಾರೆ.
ವೀರಾಜಪೇಟೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಕಳೆದ ವಾರವಷ್ಟೇ ‘ಹೊಸದಿಗಂತ’ ವರದಿ ಮಾಡಿತ್ತು.