February 8, 2026
Sunday, February 8, 2026
spot_img

ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಹಕ್ಕು ಉಲ್ಲಂಘನೆ: ಪ್ರಕರಣ ದಾಖಲಿಸುವಂತೆ ಲೋಕಸಭಾ ಸ್ಪೀಕರ್ ಗೆ ಧೈರ್ಯಶೀಲ್ ಮಾನೆ ಮನವಿ

ಹೊಸದಿಗಂತ ವರದಿ ಬೆಳಗಾವಿ:

ಕನ್ನಡ ರಾಜ್ಯೋತ್ಸವ ನ.1 ರಂದು ಇಡೀ ಬೆಳಗಾವಿ ಜಿಲ್ಲಾಧ್ಯಂತ ಕನ್ನಡ ಹಬ್ಬದ ಸಂಭ್ರಮದಲ್ಲಿದ್ದ ಕನ್ನಡಿಗರು. ಇತ್ತ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನ ನಾಯಕರು ಕರಾಳ ದಿನ ಆಚರಣೆ ಮಾಡಿದರು. ಈ ಕರಾಳ ದಿನ‌ಆಚರಣೆಗೆ ನಿರ್ಬಂಧನೆ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಅವರ ವಿರುದ್ಧ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸುವಂತೆ ಮಹಾರಾಷ್ಟ್ರದ ಹಾಥಕಣಗಲೆ ಕ್ಷೇತ್ರದ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ, ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಐಎಎಸ್ ಅಧಿಕಾರಿ ಮೊಹಮ್ಮದ್ ರೋಷನ್ ಅವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನ ಮುಗ್ದ ಮರಾಠಿಗರು ಪ್ರತಿ ವರ್ಷ ಬೆಳಗಾವಿಯಲ್ಲಿ ನವೆಂಬರ್ 1 ರಂದು ಕರಾಳ ದಿನ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಮಹಾರಾಷ್ಟ್ರ ನಾಯಕರು ಬೆಳಗಾವಿಯಲ್ಲಿ ಪ್ರತಿ‌ವರ್ಷ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ನಾನು ಕೆಲ ನಮ್ಮ‌ ನಾಯಕರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದಾಗ, ಬೆಳಗಾವಿ ಜಿಲ್ಲೆಯ ಜಿಲ್ಲಾ ಡಿಸಿ ಆಗಿರುವ ಐಎಎಸ್‌ ಅಧಿಕಾರಿ ಮೊಹಮ್ಮದ್ ರೋಷನ್ ಅವರು ಕರ್ನಾಟಕ ಗಡಿಯಲ್ಲಿ ಅಕ್ರಮವಾಗಿ ಪ್ರವೇಶಿಸದಂತೆ ನೋಟಿಸ್ ಜಾರಿ ಮಾಡಿ  ನನ್ನನ್ನು ಗಡಿ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆದ್ದರು.‌

ದೇಶದ ಜನರನ್ನು ಪ್ರತಿನಿಧಿಸುತ್ತಿದ್ದರೂ, ಯಾವುದೇ ಕ್ರಿಮಿನಲ್ ದಾಖಲೆ ಇಲ್ಲದಿದ್ದರೂ, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸದಂತೆ ನನ್ನನ್ನು ತಡೆಹಿಡಿರುವುದರಿಂದ ನನಗೆ ಅನ್ಯಾಯ ಮಾಡಿದ್ದಾರೆಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !