ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
15 ಭಕ್ತರು ಬಾಬಾ ಘುಯಿಸರನಾಥ್ ಧಾಮ್ಗೆ ಟೆಂಪೋದಲ್ಲಿ ತೆರಳುತ್ತಿದ್ದರು. ಲಾಲ್ಗಂಜ್ ರಸ್ತೆಯಲ್ಲಿ ಅವಘಡ ಸಂಭವಿಸಿದ್ದು, ಟೆಂಪೋದಲ್ಲಿದ್ದವರೆಲ್ಲ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಬಸ್ನಲ್ಲಿ ಇರುವವರೆಲ್ಲರೂ ಗಾಯಗೊಂಡಿದ್ದು, ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ.
ಸೀಮಾ ಹಾಗೂ ಕೋಮಲ್ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ.