ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಸ್ಟಾರ್ ಕಾಸ್ಟ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ನಡುವೆಯೇ, ಯಶ್ ಅವರು ಚಿತ್ರದ ಪ್ರಮುಖ ಪಾತ್ರವೊಂದನ್ನು ಅಧಿಕೃತವಾಗಿ ಪರಿಚಯಿಸಿದ್ದಾರೆ.
ಟಾಕ್ಸಿಕ್ ಲೋಕದಲ್ಲಿ ‘ನಾದಿಯಾ’ ಎಂಬ ಪಾತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾನಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಯಶ್ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಖಚಿತಪಡಿಸಿದ್ದಾರೆ.
ಹಂಚಿಕೊಂಡಿರುವ ಪೋಸ್ಟರ್‌ನಲ್ಲಿ ಕಿಯಾರಾ ಫೇರಿಟೇಲ್ ಶೈಲಿಯ ಲುಕ್‌ನಲ್ಲಿ ಮಿಂಚಿದ್ದಾರೆ. ಪರ್ಪಲ್ ಬ್ಯಾಕ್‌ಗ್ರೌಂಡ್‌ನಲ್ಲಿ ಹೈಸ್ಲಿಟ್ ಬ್ಲಾಕ್ ಡ್ರೆಸ್ ಧರಿಸಿರುವ ನಟಿಯ ಲುಕ್ ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಸಿನಿಮಾ ಬಿಡುಗಡೆಯಾಗಲು ಇನ್ನೂ ನೂರು ದಿನಗಳು ಬಾಕಿ ಇರುವ ನಡುವೆಯೇ ಈ ಪೋಸ್ಟರ್ ಅಭಿಮಾನಿಗಳಲ್ಲಿ ಡಬಲ್ ಎಕ್ಸೈಟ್‌ಮೆಂಟ್ ತಂದಿದೆ.
ಮಾರ್ಚ್ 19, 2026ರಂದು ಟಾಕ್ಸಿಕ್ ತೆರೆಕಾಣಲಿದ್ದು, ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ‘ಕ್ಲಾಸಿಕ್ ಮಾಸ್’ ಅನುಭವ ಎಂದು ಅಭಿಮಾನಿಗಳು ಈಗಾಗಲೇ ಹೇಳತೊಡಗಿದ್ದಾರೆ.
ಇನ್ನೂ ಚಿತ್ರದ ಮತ್ತೊಂದು ಟೀಸರ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಜನವರಿ 8ರಂದು ಯಶ್ ಹುಟ್ಟುಹಬ್ಬದಂದು ಹೊಸ ಟೀಸರ್ ಬರಬಹುದು ಎಂಬ ನಿರೀಕ್ಷೆ ಇದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ಯಶ್, ಈ ಬಾರಿ ಹುಟ್ಟುಹಬ್ಬವನ್ನು ಸರಳವಾಗಿಯೇ ಆಚರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

