ತೆಪ್ಪಕಾಡು ಆನೆ ಶಿಬಿರಕ್ಕೆ ರಾಷ್ಟ್ರಪತಿ ಭೇಟಿ: ಬೊಮ್ಮ, ಬೆಳ್ಳಿ ದಂಪತಿಗೆ ಅಭಿನಂದಿಸಿದ ದ್ರೌಪದಿ ಮುರ್ಮು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು.

ಈ ವೇಳೆ ದಿ ಎಲಿಫೆಂಟ್‌ ವಿಸ್ಪರರ್ಸ್‌ ಖ್ಯಾತಿಯ ಕಾವಾಡಿ ದಂಪತಿ ಬೊಮ್ಮ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿಯವರು ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಮಸಿನಗುಡಿಯ ಹೆಲಿಪ್ಯಾಡ್‌ಗೆ ಮಧ್ಯಾಹ್ನ 3.30ಕ್ಕೆ ತಲುಪಿದರು.

ಅಲ್ಲಿಂದ ಕಾರಿನಲ್ಲಿ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದರು. ತೆಪ್ಪಕ್ಕಾಡು ಆನೆ ಸಂವರ್ಧನಾ ಶಿಬಿರಕ್ಕೆ ಭೇಟಿ ನೀಡಿದ ಅವರು ಅಲ್ಲಿ ಬೊಮ್ಮ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ಬುಡಕಟ್ಟು ಜನರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಶಿಬಿರದಲ್ಲಿ ಸಾಕಿದ ಆನೆಗಳಿಗೆ ಆಹಾರ ತಿನ್ನಿಸಿದರು.

ಸಂಜೆ 5.30ಕ್ಕೆ ಮತ್ತೆ ಹೆಲಿಕಾಪ್ಟರ್ ಮೂಲಕ ಮಸಿನಗುಡಿಗೆ ತೆರಳಿದರು. ಬಜಾರ್ ಪ್ರದೇಶದಲ್ಲಿ ನಿಂತಿದ್ದ ಜನರತ್ತ ಕೈಬೀಸಿ, ವಾಹನ ನಿಲ್ಲಿಸಿ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಚಾಕಲೆಟ್‌ ವಿತರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!